ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಮಾ.7 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಪಂಚಾಯತ್ ಸಭಾಂಗಣ ಸುಬ್ರಹ್ಮಣ್ಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾರವರು ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಹಾಗೂ ಮಕ್ಕಳ ತಜ್ಞೆ ಡಾ.ರಜನಿ ಇವರು ಬೌದ್ಧಿಕ್ ನೆರವೇರಿಸಿದರು. ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ವನಜ ಭಟ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕುಮಾರಿ ಮಂದಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಶ್ರೀಮತಿ ಭವ್ಯರನ್ನು ಸನ್ಮಾನಿಸಲಾಯಿತು.
- Tuesday
- December 3rd, 2024