Ad Widget

ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಗಳ ಬಗ್ಗೆ ಶಿಕ್ಷಣ ಸಚಿವರಿಗೆ ಅಹವಾಲು ಸಲ್ಲಿಕೆ

ಕರ್ನಾಟಕ ಸರ್ಕಾರದ ಮಾನ್ಯ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ರವರು ಮಾ.6ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಬಳಗದ ಪದಾಧಿಕಾರಿಗಳು ಮಾನ್ಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಖಾಸಗಿ ಶಾಲಾ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತೋಡಿಕೊಂಡರು. ಇದೇ ವೇಳೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಬಳಗದ ಅಧ್ಯಕ್ಷರಾದ ಗದಾಧರ ಬಾಳುಗೋಡು, ಉಪಾಧ್ಯಕ್ಷೆ ಕು. ಪೂರ್ಣಿಮಾ ಚೊಕ್ಕಾಡಿ, ಕೋಶಾಧಿಕಾರಿಗಳಾದ ಮಂಜುನಾಥ್ ಬಾಳಿಲ, ಸಹಕಾರ್ಯದರ್ಶಿಗಳಾದ ಶ್ರೀಮತಿ ಜಯಶ್ರೀ, ನಿರ್ದೇಶಕರಾದ ಶ್ರೀಹರಿ ಪೈಂದೋಡಿ ಉಪಸ್ಥಿತರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!