


ಗ್ರಾಮ ಪಂಚಾಯತ್ ದೇವಚಳ್ಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜ್ಯೋತಿ ಸ್ತ್ರೀ ಶಕ್ತಿ ಗೊಂಚಲು ಸಂಘದ ವತಿಯಿಂದ ಮಾ12 ರಂದು ಮಹಿಳಾ ದಿನಾಚರಣೆ ದೇವಚಳ್ಳ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಲೋಚನಾ ದೇವ ವಹಿಸಿದ್ದರು. ಶಿಶು ಅಭಿವೃದ್ದಿ ಇಲಾಖೆಯ ಯೋಜನಾಧಿಕಾರಿ ರಶ್ಮಿ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ಪಯಸ್ವಿನಿ ಜೆಸಿ ಉಪಾಧ್ಯಕ್ಷೆ ಲತಾ ಕುದ್ಪಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ ಪಲ್ಲವಿ, ಭಾರತಿ, ಶಿಶು ಅಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ವಿಜಯ, ಗ್ರಾ.ಪಂ.ಸದಸ್ಯೆ ಪ್ರೇಮಲತಾ ಸೇವಾಜೆ, ಲೀಲಾವತಿ ಸೇವಾಜೆ ,ಸೀತಮ್ಮ ದೇವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೊಂಚಲು ಅಧ್ಯಕ್ಷೆ ಸಾವಿತ್ರಿ ರಾಮ್ ಕಣೆಮರಡ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ತಹಶೀಲ್ದಾರ್ ಅನಿತಾಲಕ್ಷ್ಮೀ ಭೇಟಿ ನೀಡಿ ಶುಭಕೋರಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗುರುಪ್ರಸಾದ್ ಸಿ., ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಪಡ್ಪು , ಶೈಲೇಶ್ ಅಂಬೆಕಲ್ಲು ದುರ್ಗಾದಾಸ್ ಮೆತ್ತಡ್ಕ, ಪ್ರಶಾಂತ್ ಮೆದು, ಗುತ್ತಿಗಾರು ಗ್ರಾಮಕರಣಿಕರು, ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ,ಆಶಾ ಕಾರ್ಯಕರ್ತೆಯರು, ಸ್ರ್ತೀ ಶಕ್ತಿ ಸಂಘದ ಪದಾಧಿಕಾರಿಗಳು ಸದಸ್ಯರು, ಮಹಿಳೆಯರು ಉಪಸ್ಥಿತರಿದ್ದರು. ಮಹಿಳಾ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಲತಾ ದೇವ ವಂದಿಸಿದರು, ಸುಶ್ಮಿತಾ ಕಡಪಳ ನಿರೂಪಿಸಿದರು.