ದ.ಕ.ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗ್ರಾಮ ಪಂಚಾಯತ್ ಮಡಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಇಂದು ಆರೋಗ್ಯ ವಂತ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಕ್ವಾಡ್ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೇವಳ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತ ಸರಿದೂಗಿಸಲು , ಹೆಣ್ಣು ಮಕ್ಕಳ ರಕ್ಷಣೆಗೆ , ಹೆಣ್ಣು ಮಕ್ಕಳ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಇವರು ಮಾತನಾಡಿ ಸರಕಾರದ ಯಾವುದೇ ಯೋಜನೆಯು ಸಫಲವಾಗಬೇಕಾದರೆ ಜನಸಾಮಾನ್ಯರು ಇಲಾಖೆಯ ಜೊತೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ನಿಂದ ಸಂಪೂರ್ಣ ರೀತಿಯ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು.ಇಲಾಖೆಯ ವಲಯ ಮೇಲ್ವಿಚಾರಕಿ ವಿಜಯ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಬಿಬಿಬಿಪಿ ಯೋಜನೆ ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಉದ್ದೇಶ ಹಾಗೂ ವಿವಿಧ ಸೌಲಭ್ಯಗಳನ್ನುಗಳನ್ನು ಸಭೆಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಆಹ್ವಾನಿತ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹ ಬಹುಮಾನ ನೀಡಿ ಗೌರವಿಸಲಾಯಿತು. ಪೋಷಣ್ ಪಕ್ವಾಡ್ ಕಾರ್ಯಕ್ರಮದನ್ವಯ ಅಂಗನವಾಡಿ ಕೇಂದ್ರಗಳ ಕೈತೋಟ ದಲ್ಲಿ ನೆಡಲು ಔಷಧೀಯ ಮತ್ತು ಹಣ್ಣಿನ ಗಿಡಗಳನ್ನು ಸಾಂಕೇತಿಕವಾಗಿ ಅಂ ಕಾರ್ಯಕರ್ತೆಯರಿಗೆ ವಿತರಿಸಲಾಯಿತು. ಅಂ.ಕಾರ್ಯಕರ್ತೆ ವಿಮಲ ಸ್ವಾಗತಿಸಿ, ಶ್ರೀಮತಿ ತಾರಾ ವಂದಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸ್ತ್ರೀ ಶಕ್ತಿ ಸದಸ್ಯರು ಆಶಾ ಕಾರ್ಯಕರ್ತೆಯರು ಕಾರ್ಯಕ್ರಮಕ್ಕೆ ಸಹಕರಿಸಿದರು.