
ಗುತ್ತಿಗಾರು ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಪೊಲೀಸ್ ಕೆಡೆಟ್ ನ ಉದ್ಘಾಟನಾ ಕಾರ್ಯಕ್ರಮವು ಮಾ.13 ರಂದು ನಡೆಯಿತು. ದ.ಕ.ಜಿ.ಪಂ.ನ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿಯವರು ಉದ್ಘಾಟಿಸಿ, ಶುಭಹಾರೈಸಿದರು. ವಿದ್ಯಾರ್ಥಿ ಪೊಲೀಸ್ ಕೆಡೆಟ್ ನ ಗುರಿ ಮತ್ತು ಉದ್ದೇಶಗಳ ಕುರಿತಂತೆ ಕೆಡೆಟ್ ನ ನೋಡೆಲ್ ಅಧಿಕಾರಿಗಳಾದ ಮಲ್ಲಿಕಾರ್ಜುನ ಮತ್ತು ಅನಿಲ್ ರವರು ಮಾಹಿತಿ ನೀಡಿದರು. ಶಾಲಾ ಮುಖ್ಯ ಗುರುಗಳಾದ ಹೆರಾಲ್ಡ್ ನೆಲ್ಸನ್ ಕ್ಯಾಸ್ಟಲಿನೊರವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ಗುತ್ತಿಗಾರು ಸ.ಪ.ಪೂ.ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಝಕೀನಾರವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ,
ಸಹಶಿಕ್ಷಕರಾದ ಪ್ರಸನ್ನ ಕುಮಾರ್ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಾಲ್ ಏನೆಕಲ್ ಕಾರ್ಯಕ್ರಮ ನಿರೂಪಿಸಿದರು.