ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡಾವಳಿಯು ಮಾ. 19 ಮತ್ತು ಮಾ. 20 ರಂದು ವೈಭವೋಪೇತವಾಗಿ ನಡೆಯಿತು. ಒತ್ತೆಕೋಲ ನಡಾವಳಿಯ ಅಂಗವಾಗಿ ಮಾ. 19 ರಂದು ಸಂಜೆ ಗಂಟೆ 6.00ಕ್ಕೆ ಸ್ಥಾನದಿಂದ ಭಂಡಾರ ತೆಗೆದು, ರಾತ್ರಿ ಗಂಟೆ 7.30ಕ್ಕೆ ಮೇಲೇರಿಗೆ ಅಗ್ನಿಸ್ಪರ್ಶ, ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 8.00ರಿಂದ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ರಾತ್ರಿ ಗಂಟೆ 10.30ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಟ್ಟು ನಡೆಯಿತು.
ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ‘ಧೀರದುಂಧುಬಿ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಮಾ. 20ರಂದು ಪ್ರಾತಃಕಾಲ
ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿಪ್ರವೇಶ, ಮಾರಿಕಳ, ಪ್ರಸಾದ ವಿತರಣೆ ನಡೆಯಿತು.
ಬಳಿಕ ಮುಳ್ಳುಗುಳಿಗ ದೈವದ ನೇಮ ನೆರವೇರಿತು.
ಈ ಕಾರ್ಯಕ್ರಮಗಳಲ್ಲಿ ಊರಿನ ಹಾಗೂ ಪರವೂರಿನ ಅನೇಕ ಭಕ್ತರು ಪಾಲ್ಗೊಂಡಿದ್ದರು.