ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಸರಕಾರಿ ಬಸ್ ನಿಲ್ದಾಣದಲ್ಲಿ ಮತ್ತು, ಖಾಸಗಿ ಬಸ್ ನಿಲ್ದಾಣ ಹಾಗೂ ನಗರದ ವಿವಿಧ ಭಾಗಗಳಲ್ಲಿ ಉಚಿತ ಮಾಸ್ಕ್ ವಿತರಣೆಯ ಮೂಲಕ ಕೋರೋನ ಜಾಗೃತಿ ಮೂಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಚಾಲನೆ ನೀಡಿದರು, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡು ಪನ್ನೆ, ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಯುವ ಮೋರ್ಚಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಸಹ ಸಂಚಾಲಕ ಲತೀಶ್ ಗುಂಡ್ಯ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಚೊಕ್ಕಾಡಿ ಸಮಿತಿಯ ಅಧ್ಯಕ್ಷರಾದ ವರ್ಷಿತ್ ಚೊಕ್ಕಾಡಿ, ಸುಳ್ಯ ಬಿಜೆಪಿ ಕಚೇರಿಯ ಕಾರ್ಯದರ್ಶಿ ಚಂದ್ರಶೇಖರ ನೆಡಿಲ್, ನಿಕೇಶ್ ಉಬರಡ್ಕ, ಶರಣ್ ಕರ್ಮಜೆ, ಕೌಶಲ್, ದೀಕ್ಷಿತ್ ಶೆಟ್ಟಿ, ರಕ್ಷಿತ್ ಐವರ್ನಾಡು,ಉಪಸ್ಥಿತರಿದ್ದರು.
- Thursday
- November 21st, 2024