
ಅಕ್ಷಯ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ನೆರವೇರಿಸಿದರು. ಗ್ರಾಂ.ಪಂ.ಸದಸ್ಯರಾದ ಜಯರಾಮ ಹಾಡಿಕಲ್ಲು ಮತ್ತು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಧನಪತಿ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಕುಂತಳಾ ಕೇವಳ ಒಕ್ಕೂಟದ ಉಪಾಧ್ಯಕ್ಷೆ ದುರ್ಗೇಶ್ವರಿ ಪಣಿಯಾಲ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.