ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಸಭೆಯು ಮಾ.07 ರಂದು ಮಯೂರ ಕಲಾಮಂದಿರ ಕೊಲ್ಲಮೊಗ್ರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆ ಸುಳ್ಯದ ಮಾಜಿ ಅದ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀಮತಿ ವಿಮಲಾ ರಂಗಯ್ಯ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಸಭಾಧ್ಯಕ್ಷತೆಯನ್ನು ಶಿವಪ್ರಸಾದ್ ಮಾದನ ಮನೆ ಏನೆಕಲ್ ವಹಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅದ್ಯಕ್ಷರಾದ ಯತೀಶ್ ರೈ, ಕೆ.ಪಿ.ಗಿರಿಧರ್, ಮಾಧವ ಚಾಂತಾಳ, ಸತೀಶ್.ಟಿ.ಎನ್, ಗ್ರಾಮಪಂಚಾಯತ್ ಸದಸ್ಯರಾದ ಅಶ್ವಥ್ ಯಡದಾಳು, ಮೋಹಿನಿ ಕಟ್ಟ, ಪುಷ್ಪರಾಜ್ ಪಡ್ಪು, ಕೋಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಉಪಾಧ್ಯಕ್ಷರಾದ ಮಣಿಕಂಠ ಕೊಳಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್.ರೈ, ಸತೀಶ್ ಕೂಜುಗೋಡು ಹಾಗೂ ವಲಯ ಒಕ್ಕೂಟದ ಅದ್ಯಕ್ಷರುಗಳು, ಊರಿನ ಮುಖಂಡರುಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾರ್ಯಕ್ರಮ ನಿರೂಪಿಸಿದರು, ಮಣಿಕಂಠ ಕಟ್ಟ ವಂದಿಸಿದರು.
ವರದಿ:-ಉಲ್ಲಾಸ್ ಕಜ್ಜೋಡಿ