ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕತ್ತು ಕೊಯ್ಯಲ್ಪಟ್ಟ ಸ್ಥಿತಿಯಲ್ಲಿ ರಕ್ತ ಸ್ರಾವವಾಗಿ ಸಾವಿಗೀಡಾದ ಘಟನೆ ಎ.16 ರ ರಾತ್ರಿ 9.15 ರ ಸುಮಾರಿಗೆ ನಡೆದಿದೆ.
ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ ಬಿದ್ದಿರುವುದನ್ನು ಕಂಡ ಟಿ.ಸಿ.ಯವರು ಪೋಲೀಸರಿಗೆ ಮಾಹಿತಿ ನೀಡಿದರು. ಪೋಲೀಸರು ಬಂದು ಮೃತದೇಹದ ಬಳಿ ಇದ್ದ ಬ್ಯಾಗ್ ಪರಿಶೀಲಿಸಿದಾಗ ಅಲ್ಲಿದ್ದಆಧಾರ್ ಕಾರ್ಡ್ ನ ಆಧಾರದಲ್ಲಿ ಆ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬವರೆಂದು ತಿಳಿದುಬಂದಿದೆ.
ಪೋಲೀಸರು ಮೃತದೇಹವನ್ನು ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದು ಶೈತ್ಯಾಗಾರದಲ್ಲಿ ಇರಿಸಿದ್ದಾರೆ.
ವ್ಯಕ್ತಿಯ ಸಾವು ಹೇಗೆ ಸಂಭವಿಸಿತೆಂಬುದು ಇನ್ನೂ ಖಚಿತ ಪಟ್ಟಿಲ್ಲ. ಇದು ಕೊಲೆಯೇ ಆತ್ಮಹತ್ಯೆಯೇ ಅಥವಾ ಬೇರೆ ಏನಾದರೂ ಆಗಿ ಸಾವು ಸಂಭವಿಸಿರಬಹುದೇ ಎಂಬುದು ತನಿಖೆಯ ಬಳಿಕ ತಿಳಿಯಬೇಕಿದೆ.