ಗುತ್ತಿಗಾರು ಸರಕಾರಿ ಪ್ರೌಢಶಾಲೆಯ 1೦ನೇ ತರಗತಿ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆ ಹೋಗಿದ್ದ ವೇಳೆ ನಾಲ್ಕು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಹಾಗಾಗಿ ಇಂದು ನಡೆಯಬೇಕಾಗಿದ್ದ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ ಘಟನೆ ವರದಿಯಾಗಿದೆ.
ನಡುಗಲ್ಲು, ಕಂದ್ರಪ್ಪಾಡಿ, ಮೆಟ್ಟಿನಡ್ಕ ಹಾಗೂ ಚತ್ರಪ್ಪಾಡಿಯ ನಾಲ್ವರು ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ಕೂಡಾ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದ್ದು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯರು ಹಾಗೂ ಸಿಬ್ಬಂದಿಗಳು ಪ್ರೌಢಶಾಲೆಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
- Thursday
- November 21st, 2024