ಮೇ 1 ರಿಂದ ವ್ಯಾಕ್ಸಿನೇಷನ್ ಪಡೆಯುವುದರಿಂದ ವ್ಯಾಕ್ಸಿನೇಷನ್ ಪಡೆದ 60 ದಿನಗಳವರೆಗೆ ರಕ್ತದಾನ ಮಾಡುವಂತಿಲ್ಲ. ಹಾಗಾಗಿ ರಕ್ತದ ಬೇಡಿಕೆ ಹೆಚ್ಚಾಗಲಿದ್ದು 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ತಮ್ಮ ನಗರದ ರಕ್ತ ನಿಧಿಗಳಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರ ವಿನಂತಿಸುತ್ತದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024