
ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ದೇವರಾಜ್ ಎಂ. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಾಣಿಯೂರು ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಯೋಗಿನಿ ಎಸ್. ಶೆಟ್ಟಿ ಅವರನ್ನು ಕಡಬ ತಾಲೂಕು ಪಂಚಾಯತ್‌ನಲ್ಲಿ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಯವರ ಸೂಚನೆ ನೀಡಿದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನೆಲ್ಯಾಡಿ ಗ್ರಾ. ಪಂ.ನ ಅಭಿವೃದ್ಧಿ ಅಧಿಕಾರಿಯಾಗಿದ್ದ ದೇವರಾಜ್ ಅವರನ್ನು ನೇಮಕಗೊಳಿಸಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಆದೇಶ ನೀಡಿದ್ದಾರೆ.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮುಂಡೋಡಿ ನಿವಾಸಿಯಾಗಿರುವ ದೇವರಾಜ್ ಅವರು ೧೯೮೯ರಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಆರಂಭಿಸಿ, ಸುಮಾರು ೧೮ ವರ್ಷ ಸೇವೆ ಸಲ್ಲಿಸಿದ್ದಾರೆ. ೨೦೦೮ರಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್‌ಗೆ ವರ್ಗಾವಣೆಗೊಂಡು, ಕಾರ್ಯದರ್ಶಿ, ಅಭಿವೃದ್ಧಿ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ಕಾಣಿಯೂರು ಗ್ರಾಮ ಪಂಚಾಯತ್‌ಗೆ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆಗೊಂಡಿರುತ್ತಾರೆ.