ಕೊಲ್ಲಮೊಗ್ರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಿಗೆ ಆರೋಗ್ಯದ ರಕ್ಷಣೆಗಾಗಿ ಯೋಜನೆಯ ಮುಖಾಂತರ ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಯೋಜನೆಯಲ್ಲಿ ಈ ವರ್ಷ ಆರೋಗ್ಯ ರಕ್ಷಾ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಕಾರ್ಡನ್ನು ಇಂದು ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಹಾಗೂ ಯೋಜನಾಧಿಕಾರಿ ಚೆನ್ನಕೇಶವ ಹಾಗೂ ಊರಿನ ಒಕ್ಕೂಟದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯ ಕಾಮಗಾರಿಯ ಬಗ್ಗೆ ಸಭೆಯಲ್ಲಿ ಚರ್ಚಿಸಿ ಮುಂದಿನ ಒಂದು ತಿಂಗಳೊಳಗೆ ಗ್ರಾಮಪಂಚಾಯತ್ ಕೊಲ್ಲಮೊಗ್ರ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಾಧವ ಚಾಂತಾಳ, ಉಪಾಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು, ಒಕ್ಕೂಟದ ಅಧ್ಯಕ್ಷರಾದ ಯಶೋಧ ಅಂಬೆಕಲ್ಲು, ಒಕ್ಕೂಟದ ಅಧ್ಯಕ್ಷ ಜನಾರ್ಧನ, ಆಂತರಿಕ ಲೆಕ್ಕಪರಿಶೋಧಕರಾದ ಉಮೇಶ್, ಸ್ಥಳೀಯರಾದ ಚಂದ್ರಶೇಖರ್ ಕೊಂಡಲ ಹಾಗೂ ರುಕ್ಮಯ್ಯ ಗೌಡ ದೊಡ್ಡಿಹಿತ್ಲು, ಭರತ್ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಮಣಿಕಂಠ, ಸತೀಶ್.ಟಿ.ಎನ್. , ವಲಯ ಮೇಲ್ವಿಚಾರಕರಾದ ಸೀತಾರಾಮ, ಸೇವಾ ಪ್ರತಿನಿಧಿಗಳಾದ ಸಾವಿತ್ರಿ, ಶೋಭಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
✍ವರದಿ:-ಉಲ್ಲಾಸ್ ಕಜ್ಜೋಡಿ