
ಸುಳ್ಯ ತಾಲೂಕಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತ ಹೋಗುತ್ತಿದ್ದು ಇಂದು 86 ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ನಿನ್ನೆ 65 ಪ್ರಕರಣ ಪತ್ತೆಯಾಗಿದ್ದು, ಇಂದು 86 ಮಂದಿಗೆ ಪಾಸಿಟಿವ್ ಬಂದಿದ್ದು, ಪ್ರಕರಣದ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.