- Thursday
- April 3rd, 2025

ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು...

ಸುಳ್ಯ ತಾಲೂಕಿನಲ್ಲಿ ಇಂದು 42 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ನಿನ್ನೆ 86 ಕ್ಕೇರಿದ ಪ್ರಕರಣ ಇಂದು ಕಡಿಮೆಯಾಗಿ 42 ಮಂದಿಗೆ ಪಾಸಿಟಿವ್ ಬಂದಿದೆ. ಸುಳ್ಯದಲ್ಲಿ ಒಟ್ಟು 329 ಪ್ರಕರಣಗಳಿವೆ. 29 ಜನ ಗುಣಮುಖರಾಗಿದ್ದಾರೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಲಸಿಕೆ ಲಭ್ಯವಿಲ್ಲದ ಕಾರಣ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಕೆವಿಜಿ ಪುರಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಾಳೆ(ಮೇ4) ಲಸಿಕಾ ಕಾರ್ಯಕ್ರಮ ಇರುವುದಿಲ್ಲ. ಯಾವುದೇ ಲಸಿಕೆ ಲಭ್ಯವಿಲ್ಲದ ಕಾರಣ ಲಸಿಕಾ ಕಾರ್ಯಕ್ರಮ ನಾಳೆ ಇರುವುದಿಲ್ಲ. ಕೋವಿಡ್ ಲಸಿಕೆ ಬಂದಾಗ ತಿಳಿಸಲಾಗುವುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಕೋವಿಡ್ ಪ್ರತಿರೋಧಕವಾಗಿ ನೀಡುವ ಕೋವ್ಯಾಕ್ಸಿನ್ ಕೆಲವು...