ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ಟಿನಡ್ಕ ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17 ರ ಹರೆಯದ ಯುವತಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿನ ಲಾಡ್ಜ್ ವೊಂದರಲ್ಲಿ ಬಲಾತ್ಕಾರದಿಂದ ನಿರಂತರ ಅತ್ಯಾಚಾರ ಎಸಗಿದ್ದು, ಯುವತಿಯ ಹೊಟ್ಟೆಯನ್ನು ನೋಡಿದ ಆಕೆಯ ತಾಯಿಯು ಸಂಶಯಗೊಂಡು ಸುಬ್ರಹ್ಮಣ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.