ರಾಷ್ಟ್ರದಾದ್ಯಂತ ಕೊರೊನ ನಿಯಂತ್ರಣದಲ್ಲಿದ್ದರೂ ನಮ್ಮ ದೇಶದಾದ್ಯಂತ ಕೊರೊನ ಎರಡನೇ ಅಲೆ ಉಂಟಾಗಲು ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತ ವೈಫಲ್ಯವೇ ಕಾರಣ. ಚುನಾವಣೆಯ ಸಭೆ ಸಮಾರಂಭಗಳಿಗೆ ಸಾವಿರಾರು ಜನ ಸೇರಲು ಅವಕಾಶ ಮಾಡಿಕೊಟ್ಟದ್ದು ಎರಡನೇ ಅಲೆ ಉಂಟಾಗಿದೆ. ಎರಡನೇ ಅಲೆ ಬರುತ್ತದೆ ಎಂದು ಗೊತ್ತಿದ್ದರೂ ಸರಕಾರ ವೈದ್ಯಕೀಯ ಸಿದ್ಧತೆ ಮಾಡದೇ ನಿರ್ಲಕ್ಷ್ಯ ಮಾಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಆಸ್ಪತ್ರೆ, ಬೆಡ್ ಕೊರತೆ ಯಾದರೇ ಸರಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಲಾಡ್ಜ್ ಗಳನ್ನು ತುರ್ತು ಚಿಕಿತ್ಸೆಗೆ ಬಳಸಿಕೊಳ್ಳಬೇಕಿತ್ತು. ಆಸ್ಪತ್ರೆಗೆ ಹೋದರೇ ಸಾಯುತ್ತಾರೆಂಬ ವಾತಾವರಣ ನಿರ್ಮಾಣವಾಗಿದೆ. ಅವ್ಯವಸ್ಥೆ ಗಳಿಂದಾಗಿ ವೈದ್ಯಕೀಯ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲದಾಗಿದೆ. ಜನತಾ ಕರ್ಫ್ಯೂ ಹೇರಿರುವುದರಿಂದ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗ ಹಾಗೂ ಕೂಲಿ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದ್ದು ಅವರಿಗೆ ಯಾವುದೇ ಪರಿಹಾರ ಸೂಚಿಸಿಲ್ಲ. ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಿದ್ದರೂ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದು ತೊಂದರೆಯಾಗಿದೆ.
ತಮ್ಮದೇ ಸರಕಾರವಿದ್ದರೂ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡದೇ ತೇಜಸ್ವಿ ಸೂರ್ಯರಂತಹ ಅಪ್ರಬುದ್ಧ ಸಂಸದರು ಕೋಮವೈರಸ್ ಉತ್ಪಾದಿಸುವ ಕೆಲಸ ಮಾಡುತ್ತಿದ್ದಾರೆ. ಸೂಕ್ತ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವಲ್ಲಿ ಸರಕಾರ ವಿಫಲಗೊಡಿದೆ.
ಅಕ್ಸಿಜನ್ ಪೂರೈಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದಂತೆ ಆಡಳಿತ ನಿರ್ಲಕ್ಷ್ಯ ಮಾಡುತ್ತಿರುವ ಸರಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತಂದು ಜನತೆ ಸೂಕ್ತ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ ಜನರಲ್ಲಿ ಆತ್ಮವಿಶ್ವಾಸ ಮೂಡಿಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
- Tuesday
- December 3rd, 2024