Ad Widget

ಮತ್ತೆ 14 ದಿನ ಲಾಕ್‌ಡೌನ್ : ಜೂನ್ 7 ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸರಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್‌ಡೌನ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ. ಜೂನ್ 7ರ ಬೆಳಿಗ್ಗೆ 6 ಗಂಟೆಯ ವರೆಗೆ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಜೂನ್ 7ರ ವರೆಗೆ ಈಗ ಜಾರಿಯಲ್ಲಿರುವ ಮಾರ್ಗಸೂಚಿಯೇ ಜಾರಿಯಲ್ಲಿ ಇರುತ್ತದೆ. ಈ ಮಧ್ಯೆ, ಕೋವಿಡ್ ಚಿಕಿತ್ಸೆ ಪ್ರಕ್ರಿಯೆ ಎಂದಿನಂತೆ ಮುಂದುವರಿಲಿದೆ. ಜನರು ಕೋವಿಡ್ ನಿಯಂತ್ರಣದಲ್ಲಿ ನಮ್ಮ ಜೊತೆ ಕೈಜೋಡಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!