ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯ ಸಚಿವರಾದ ಶ್ರೀ ಅಂಗಾರ ರವರು ಮೇ 25 ರಂದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಕೋವಿಡ್ ನ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎರಡು oxigen concentrator ನೀಡಿದರು. ಮತ್ತು ಕೋವಿಡ್ ಕಾರ್ಯಪಡೆಯು ರೋಗಿಗಳನ್ನು ಸಾಗಿಸುವ ತುರ್ತು ವಾಹನದ ವ್ಯವಸ್ಥೆಯ ಸಂಪೂರ್ಣ ವೆಚ್ಚವನ್ನು ಭರಿಸುವ ಭರವಸೆ ನೀಡಿ ಪಿ.ಪಿ.ಇ ಕಿಟ್ ನೀಡಿದರು. ಕೋವಿಡ್ ವಾರಿಯರ್ ಗಳಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿ ವಾರಿಯರ್ ಗಳಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಚಾಂತಾಳ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಹಾಗೂ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಪಿಡಿಓ ರವಿಚಂದ್ರ ಹಾಗೂ ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಲ್ಲವಿ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ಶುಭೋದ್ ರೈ ಮೆನಾಲ, ಚಂದ್ರಹಾಸ ಶಿವಾಲ ಹಾಗೂ ಉದಯ ಶಿವಾಲ ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ