ಗುತ್ತಿಗಾರು ಗ್ರಾಮ ಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆಯು ಮೇ.25 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಆಚಳ್ಳಿ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಈ ಸಭೆಯಲ್ಲಿ ನಿರ್ಣಯಿಸಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತೀರ್ಮಾನಿಸಲಾಯಿತು. ಹೊರ ಜಿಲ್ಲೆಯಿಂದ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದವರು ಕನಿಷ್ಟ ಏಳು ದಿನಗಳವರೆಗೆ ಮನೆಯಲ್ಲೇ ಕ್ವಾರಂಟೈನ್ ಅನುಸರಿಸಬೇಕು. ಪಾಸಿಟಿವ್ ಪ್ರಥಮ ಸಂಪರ್ಕಿತರು ಸಾರ್ವಜನಿಕವಾಗಿ ಸಂಚರಿಸುತ್ತಿರುವುದು ಕಂಡುಬಂದಿರುವುದರಿಂದ ಮುಂದಿನ ಎಲ್ಲಾ ಪ್ರಥಮ ಸಂಪರ್ಕಿತರಿಗೆ ಕ್ವಾರಂಟೈನ್ ಮೊಹರು ಹಾಕುವುದಾಗಿ ತೀರ್ಮಾನಿಸಿದೆ. ಗುತ್ತಿಗಾರು ವ್ಯಾಪ್ತಿಯ ಎಲ್ಲಾ ಅಂಗಡಿಗಳಲ್ಲಿ ಪೂ. 9-00 ಗಂಟೆಗೆ ವ್ಯಾಪಾರವನ್ನು ಸ್ಥಗಿತಗೊಳಿಸಿ 9-30 ಕ್ಕೆ ಅಂಗಡಿಯನ್ನು ಮುಚ್ಚತಕ್ಕದ್ದು. 9-30 ರ ನಂತರ ಪೂರ್ಣ ಅಥವಾ ಭಾಗಶಃ ತೆರೆದಿರುವ ಅಂಗಡಿಗಳಿಗೆ ದಂಡ ವಿಧಿಸುವುದಾಗಿ ತೀರ್ಮಾನಿಸಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದಿದ್ದಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಿಕೊಡುವುದಾಗಿ ತೀರ್ಮಾನಿಸಿದೆ.
ವರದಿ :- ಉಲ್ಲಾಸ್ ಕಜ್ಜೋಡಿ