ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ನಿರಂತರ ಕೊರೋನಾ ಬಾಧಿತರ ಬೇಟಿ ಮಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆದೇ ರೀತಿ ಮೇ.27 ಮತ್ತು 28 ರಂದು ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೊಲ್ಲಮೊಗ್ರ ಗ್ರಾಮದ 5 ಮನೆಗಳಿಗೆ ಬೇಟಿ ನೀಡಿ ಕೊರೋನಾ ಬಾಧಿತರ ಆರೋಗ್ಯ ವಿಚಾರಿಸುವ ಕೆಲಸ ಮಾಡಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಯಶವಂತ, ಹರ್ಷ ಅಡ್ನೂರುಮಜಲು ಮತ್ತು ಚಂದ್ರಶೇಖರ ಕೋನಡ್ಕ ಉಪಸ್ಥಿತರಿದ್ದರು.
*✍ವರದಿ :- ಉಲ್ಲಾಸ್ ಕಜ್ಜೋಡಿ*