Ad Widget

ಬೇಡಿಕೆ ಈಡೇರಿಕೆಗೆ ಅತಿಥಿ ಉಪನ್ಯಾಸಕರಿಂದ ಆನ್ಲೈನ್ ಚಳುವಳಿ

ಸರ್ಕಾರಿ ಪದವಿಪೂರ್ವ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವ ಉದ್ದೇಶದಿಂದ ರಾಜ್ಯಮಟ್ಟದ ಆನ್ಲೈನ್ ಚಳುವಳಿ ಹಮ್ಮಿಕೊಂಡಿದೆ.
ಸರಕಾರ ಈ ಕೂಡಲೇ ಬಾಕಿ ಇರುವ 2021 ನೇ ಶೈಕ್ಷಣಿಕ ಸಾಲಿನ ಎಲ್ಲಾ ಮಾಸಿಕ ವೇತನವನ್ನು ಬಿಡುಗಡೆ ಮಾಡಬೇಕು. ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸುತ್ತಾ ಇದ್ದ ಅತಿಥಿ ಉಪನ್ಯಾಸಕರನ್ನು ಮುಂದಿನ ದಿನಗಳಲ್ಲಿ ಸೇವೆಗೆ ನೇಮಕಾತಿ ಮಾಡಿಕೊಳ್ಳಬೇಕು.
2021 ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರ ಫೆಬ್ರವರಿ ತಿಂಗಳ ಗೌರವಧನ ಮಾತ್ರ ಬಿಡುಗಡೆ ಮಾಡಿದೆ ನಂತರ ಮಾರ್ಚ್ ತಿಂಗಳು ಸೇರಿದಂತೆ ಇತರ ತಿಂಗಳ ಗೌರವ ಧನ ಬಿಡುಗಡೆ ಮಾಡಿಲ್ಲ, ಈ ಕೊರೋನ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಇವರು ಕಡೆ ಮುಖಮಾಡದೆ ಇರುವುದು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಸಂಕಷ್ಟಗಳನ್ನು ತಿಳಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಆನ್ಲೈನ್ ಚಳುವಳಿ ನಡೆಸಲು ನಿರ್ಧರಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading