ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಳಿಕೆಯಾಗದಿರುವುದರಿಂದ ಮತ್ತೊಂದು ವಾರ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ಹೆಚ್ಚುತ್ತಲೇ ಇದ್ದು, ಪಾಸಿಟಿವಿಟಿ ದರವನ್ನು ಕನಿಷ್ಟ ಮಟ್ಟಕ್ಕೆ ಇಳಿಸುವ ದೃಷ್ಟಿಯಿಂದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತವಾರಿ ಸಚಿವರು ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಒಲವು ತೋರಿದ್ದು, ಎಲ್ಲರ ಅಭಿಪ್ರಾಯ ಪರಿಗಣಿಸಿ ಸೋಂಕು ನಿಯಂತ್ರಣ ಮಾಡುವ ದೃಷ್ಟಿಯಿಂದ ಜೂ.೨೦ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಡಾ.ಕೆ.ವಿ. ರಾಜೇಂದ್ರ ಹೇಳಿದ್ದಾರೆ.