
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ೭೩ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ ಧ್ವಜಾರೋಹಣ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ|ಗೋವಿಂದ್.ಎನ್.ಎಸ್ ವಹಿಸಿದ್ದರು. ಹಿರಿಯ ಕಾರ್ಯಕರ್ತರಾದ ಮಂಜುನಾಥ್ ಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ಘಟಕದ ನಗರ ಕಾರ್ಯದರ್ಶಿ ಇಲೈಅರಸ್ ಉಪಸ್ಥಿತರಿದ್ದರು. ರಾಜ್ಯ ಕಾರ್ಯಕಾರಣಿ ಸದಸ್ಯೆ ಮಂದಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ನಾಯಕ ಲೋಹಿತ್ ಮುಚ್ಚಾರ ಬೌದ್ಧಿಕ್ ಮಾಡಿದರು. ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ನಾಯಕಿ ಸೌಮ್ಯ ಸ್ವಾಗತಿಸಿ ನಿರೂಪಿಸಿದರು. ಪುತ್ತೂರು ಜಿಲ್ಲಾ ಸಂಚಾಲಕ ಹಿತೇಶ್ ಕಟ್ರಮನೆ ವಂದಿಸಿದರು.