ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಕಲ್ಮಕಾರು ಒಕ್ಕೂಟದ 42 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ನ್ಯಾಯವಾದಿಗಳಾದ ಗುರುಚರಣ್ ಕೊಪ್ಪಡ್ಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಕಾರು ಒಕ್ಕೂಟದ ಅಧ್ಯಕ್ಷರಾದ ಪುಷ್ಪರಾಜ್ ಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ, ನಾರಾಯಣ, ಚಂದ್ರಶೇಖರ್, ಕಲ್ಮಕಾರು ಒಕ್ಕೂಟದ ಜತೆ ಕಾರ್ಯದರ್ಶಿ ತಿರುಮಲೇಶ್ವರ.ಕೆ.ಎಂ, ಕೋಶಾಧಿಕಾರಿ ಮೀನಾಕ್ಷಿ.ಎಂ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್, ಸೇವಾಪ್ರತಿನಿಧಿ ಪದ್ಮಾವತಿ, ನಗದು ಸಂಗ್ರಾಹಕರಾದ ಪ್ರಶಾಂತ್ ಹಾಗೂ ಊರಿನ ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.
*✍ವರದಿ :- ಉಲ್ಲಾಸ್ ಕಜ್ಜೋಡಿ*