ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಕೊಲ್ಲಮೊಗ್ರ ಒಕ್ಕೂಟದ 40 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಟ್ಟ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ದೋಣಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್, ಒಕ್ಕೂಟದ ಪದಾಧಿಕಾರಿಗಳಾದ ಕುಶಾಲಪ್ಪ ಜಾಲುಮನೆ, ಶ್ರೀನಿವಾಸ್ ಕೊಲ್ಲಮೊಗ್ರ, ಕಟ್ಟ ಒಕ್ಕೂಟದ ಅಧ್ಯಕ್ಷರಾದ ಮೋಹಿನಿ ಕಟ್ಟ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಮಣಿಕಂಠ ಕಟ್ಟ, ಸೇವಾಪ್ರತಿನಿಧಿಗಳಾದ ಸಾವಿತ್ರಿ ಮತ್ತು ಶೋಭಾ, ನಗದು ಸಂಗ್ರಾಹಕರಾದ ಶ್ರೀಮತಿ ಭವ್ಯ ಮತ್ತು ಶ್ರೀಮತಿ ಕೀರ್ತಿ ಹಾಗೂ ಊರಿನ ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.
✍ವರದಿ :- ಉಲ್ಲಾಸ್ ಕಜ್ಜೋಡಿ