Ad Widget

ಮರ್ಕಂಜ : ಸ್ವ-ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.16 ರಂದು ಮರ್ಕಂಜ ಒಕ್ಕೂಟದ ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಚೆನ್ನಕೇಶವ ಅವರು ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗೋಳಿಯಡ್ಕ ಒಕ್ಕೂಟದ ಅದ್ಯಕ್ಷರಾದ ರಾಧಾಕೃಷ್ಣ ಗೌಡ, ಮರ್ಕಂಜ ಒಕ್ಕೂಟದ ಅದ್ಯಕ್ಷರಾದ ವೇಣುಗೋಪಾಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್, ನಗದು ಸಂಗ್ರಾಹಕರಾದ ದಿವ್ಯಾ ಮತ್ತು ಕೃಷ್ಣಪ್ಪ, ಸೇವಾ ಪ್ರತಿನಿಧಿಗಳಾದ ರೋಹಿಣಿ ಮತ್ತು ಶ್ರೀಮತಿ ರೋಹಿತಾ ಹಾಗೂ ಊರಿನ ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!