
ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಭಯ ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಾ.ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಪ್ರೋಟೀನ್ ವಿತರಣಾ ಕಾರ್ಯಕ್ರಮವನ್ನು ಅಭಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು. ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ನೆಕ್ರಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪ್ರಾ.ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ತ್ರಿಮೂರ್ತಿಯಾಗಿದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು, ಹೆತ್ತವರು ಉಪಸ್ಥಿತರಿದ್ದರು. ಅಭಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 40 ಮಕ್ಕಳಿಗೆ ಉಚಿತವಾಗಿ ಪೌಷ್ಟಿಕಾಂಶದ ಪೌಡರ್ ಡಬ್ಬಗಳನ್ನು ವಿತರಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ವಿಜಯ ಕಾರ್ಯಕ್ರಮ ನಿರೂಪಿಸಿದರು.