
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ
ಸನ್ಮಾನ ಹಾಗೂ ಉಪನ್ಯಾಸ ಜುಲೈ 21 ರಂದು ಪೂ ಪೂ.ಗಂಟೆ 10ಕ್ಕೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ
ಉದ್ಘಾಟನೆಯನ್ನು ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಕಣಕಾರರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಪ್ರಭ ಪತ್ರಿಕೆಯ ಮಾಜಿ ಪತ್ರಕರ್ತ ಶಿವರಾಮ ಕೊಯಿಂಗೋಡಿಮೂಲೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ, ಎನ್. ಭವಾನಿಶಂಕರ್ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರ.ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ತಿಳಿಸಿದ್ದಾರೆ.