ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ
ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಗ್ರಾಮ ಪಂಚಾಯತ್, ಅಜ್ಜಾವರ
ಇವುಗಳ ಜಂಟಿ ಆಶ್ರಯದಲ್ಲಿ ಅರಣ್ಯ ಇಲಾಖೆ ಸುಳ್ಯ ಇವರ ಸಹಯೋಗದೊಂದಿಗೆ ಸಮುದಾಯ ಕಾರ್ಯಕ್ರಮದ ಅಂಗವಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ “ಹಸಿರು-ಉಸಿರು” ವನಮಹೋತ್ಸವ ಕಾರ್ಯಕ್ರಮವನ್ನು ಅಜ್ಜಾವರದ ತುದಿಯಡ್ಕ ಎಂಬಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯಾವತಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲೀಲಾ ಮನಮೋಹನ್ ಅವರು ಮಾತನಾಡಿ
‘ಗಿಡ ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಇಂತಹ ಕಾರ್ಯ ನಿರಂತರವಾಗಿರಲಿ’ ಎಂದು ಶುಭಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಪ್ರಸಾದ್ ಕುಮಾರ್ ಮೇನಾಲ, ಉಪ ವಲಯ ಅರಣ್ಯಾಧಿಕಾರಿಗಳಾದ ಯಶೋಧರ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಶ್ರೀಮತಿ ರತ್ನಾವತಿ ಡಿ, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾ. ಅನುರಾಧಾ ಕುರುಂಜಿ, ಅಜ್ಜಾವರ ಗ್ರಾಮದ ಅರಣ್ಯ ರಕ್ಷಕರಾದ ದಿವೀಶ್ ಕೆ, ರೆಡ್ ಕ್ರಾಸ್ ಘಟಕದ ನಾಯಕರಾದ ನಿತಿನ್ ಕೆ ಆರ್, ಕೃತಿಕಾ ಕೆ ಜೆ, ಗಗನ್ ಎನ್ ಎಚ್, ಕಾವ್ಯಾ ಡಿ ಕೆ ಹಾಗೂ ರೆಡ್ ಕ್ರಾಸ್ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- Thursday
- November 21st, 2024