ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯದ ಅಂಬಟೆಡ್ಕದ ಶ್ರೀ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ ಇಂದು ಜರುಗಿತು.
ವಿಶೇಷ ಕಾರ್ಯಕಾರಿಣಿ ಸಭೆಯನ್ನು ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಪೂಜಾ ಪೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅವಧಿಯಲ್ಲಿ ನೀಡಲಾದ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲದೆ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಹೇಗೆ ಮಾಡಬೇಕು ಹಾಗೂ ಮುಂದಿನ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಕೆಲಸ ಮಾಡುವ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತರಾಗಬೇಕು. ಸರಕಾರದ ಯೋಜನೆ ಪ್ರತಿಯೊಬ್ಬರ ಮನೆಗೆ ತಲುಪುವಂತೆ ಮಾಡಬೇಕು. ಕೊರೊನದಂತ ಮಹಾಮಾರಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಪಡೆಯಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಶುಭದಾ ಎಸ್. ರೈ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸೇವಂತಿ ಶ್ರಿಯಾನ್, ತ್ರಿವೇಣಿ , ಸುಳ್ಯ ಮಹಿಳಾ ಮೋರ್ಚಾ ಸಹಾಪ್ರಭಾರಿ ಪ್ರಭಾ ಆಚಾರ್ಯ, ಮಹಿಳಾ ಮೋರ್ಚಾ ಸದಸ್ಯರು , ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಧ್ಯಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಮಂಡಲ ಸಮಿತಿ ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಸಮಾರೋಪ ಭಾಷಣಗೈದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಮಾಜಿ ಜಿ.ಪಂ. ಸದಸ್ಯೆ ಶ್ರೀಮತಿ ಆಶಾ ತಿಮ್ಮಪ್ಪ, ಸೇರಿದಂತೆ ಮಹಿಳಾ ಮೋರ್ಚಾದ ಸದಸ್ಯರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮೊರ್ಚಾದ ಪ್ರ.ಕಾರ್ಯದರ್ಶಿಗಳಾದ ಶ್ರೀಮತಿ ತೇಜೆಸ್ವಿನಿ ಸ್ವಾಗತಿಸಿ, ಶ್ರೀಮತಿ ಗೀತಾ ಶೇಖರ್ ಉಳುವಾರು ವಂದಿಸಿದರು. ಈ ಸಂದರ್ಭದಲ್ಲಿ ಆಟಿ ಉತ್ಸವ ಜರುಗಿತು
- Thursday
- November 21st, 2024