Ad Widget

ಅಕ್ರಮ ಮರ ಸಾಗಾಟ – ಇಬ್ಬರ ಬಂಧನ, ಮರ ವಶ

ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು
ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಿಬ್ಬಂದಿಗಳು ಪತ್ತೆಹಚ್ಚಿದ್ದಾರೆ.

. . . . . .

ಮರದ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಾದ ಕಾಂಞಗಾಡ್ ಕುರಿಚಿಯಲ್ ನಿವಾಸಿ ಪಿ.ದನೇಶ್(28) ಹಾಗೂ ಕಣ್ಣೂರು ನಿವಾಸಿ ಎಂ.ರಾಹುಲ್(26) ಎಂಬುವವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಪ್ರಮುಖ ಆರೋಪಿ ಅಚ್ಚು (ಅಶ್ರಫ್) ವಿರಾಜಪೇಟೆಯ ನಿವಾಸಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ. ಈತನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಾರಿ ಹಾಗೂ ಲಕ್ಷಾಂತರ ಮೌಲ್ಯದ ಬೀಟೆ ಮರದ 23 ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ತರಕಾರಿ ಕಟ್ಟುಗಳ ಅಡಿಭಾಗದಲ್ಲಿ ಮರ ಇರಿಸಿ ಸಾಗಿಸುತ್ತಿದ್ದರು.
ಮಡಿಕೇರಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪೂವಯ್ಯ.ಎ.ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ದಯಾನಂದ ಹಾಗೂ ವಲಯ ಅರಣ್ಯಾಧಿಕಾರಿ ಮಧುಸೂದನ.ಎಂ.ಕೆ. ಅವರ ಮಾರ್ಗದರ್ಶನದಲ್ಲಿ ಸಂಪಾಜೆ ತನಿಖಾ ಠಾಣೆಯಲ್ಲಿ ಕಾರ್ಯನಿರತರಾಗಿದ್ದ ಸಿಬ್ಬಂದಿ ಜನಾರ್ಧನ ಪಿ.ಡಿ ಪ್ರಕರಣ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು.
ಉಪ ವಲಯ ಅರಣ್ಯಾಧಿಕಾರಿಗಳಾದ ವಿನಯಕೃಷ್ಣ ಎಂ.ಸಿ, ಬಸವರಾಜಪ್ಪ ಎಸ್.ಹೆಚ್, ಅರಣ್ಯ ವೀಕ್ಷಕ ನಾಗರಾಜ್.ಎಸ್, ವಾಹನ ಚಾಲಕರಾದ ಶಿವಪ್ರಸಾದ್, ಭರತ ಹಾಗೂ ಇತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!