ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಕೌಟುಂಬಿಕ ಹಾಗೂ ಆರೋಗ್ಯ ಸಮಸ್ಯೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.