ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ|ಬಿ.ಆರ್ ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಜೂ.28ರಿಂದ ಆರಂಭಿಸಲಾಗಿದೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೬ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ೬ರಿಂದ ೧೦ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ನೀಡಲಾಗುವುದು. ಅಭ್ಯರ್ಥಿಯು ತನ್ನ ಎಸ್.ಎ.ಟಿ.ಎಸ್ ಸಂಖ್ಯೆ, ಭಾವಚಿತ್ರ, ಜಾತಿ/ಆದಾಯ ಪ್ರಮಾಣ ಪತ್ರ, ಆಧಾರ್ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ, ವಸತಿ ಶಾಲೆಯಲ್ಲಿಯೇ ಆನ್‌ಲೈನ್‌ನಲ್ಲಿ ಸಲ್ಲಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-8-2021 ಹಾಗೂ ಪರೀಕ್ಷಾ ದಿನಾಂಕ 16-09-2021 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024