

ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ರಚನೆಯಾಗಲಿದ್ದು ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಸುಳ್ಯದ ಮಾಜಿ ಸಚಿವ ಎಸ್. ಅಂಗಾರ ಮತ್ತೊಮ್ಮೆ ಸಚಿವರಾಗುವುದು ಖಚಿತವಾಗಿದೆ. ಸಿಎಂ ಬೊಮ್ಮಾಯಿ ಯವರು ಅಂಗಾರರಿಗೆ ಕರೆ ಮಾಡಿ ಬೆಂಗಳೂರಿಗೆ ಬರಲು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕರಾವಳಿಯ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಕೂಡ ಸಚಿವರಾಗಲಿದ್ದಾರೆ ಎಂದು ಹೇಳಲಾಗಿದೆ.