Ad Widget

625 ಅಂಕ ಪಡೆದ ವಿದ್ಯಾರ್ಥಿ ಅನನ್ಯ ಳಿಗೆ ಯುವ ಮೋರ್ಚಾ ವತಿಯಿಂದ ಸನ್ಮಾನ

ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ, ಗುತ್ತಿಗಾರು ಗ್ರಾಮದ ಮಣಿಯಾನ ಮನೆ ನಿವಾಸಿ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ ಅನನ್ಯ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಲಳಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೊಡಿ, ಸುಳ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಉಪಾಧ್ಯಕ್ಷರಾದ ಮನುದೇವ್, ಉಮೇಶ ಗೌಡ, ಕಡಬ ತಾಲೂಕು ಯುವಜನ ಕೂಟದ ಅಧ್ಯಕ್ಷರಾದ ಶಿವಪ್ರಸಾದ್ ಮೈಲೇರಿಯವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!