
ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸುಬ್ರಹ್ಮಣ್ಯದ ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ದಂಪತಿಗಳ ಪುತ್ರಿ ವೆನೆಸಾ ಶರಿನಾ ಡಿಸೋಜಾ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಉಪಾಧ್ಯಕ್ಷರಾದ ಮನುದೇವ್, ಉಮೇಶ ಗೌಡ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಲಲಿತ ಗುಂಡಿಗದ್ದೆ, ಐನಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಕಡಬ ತಾಲೂಕು ಯುವಜನ ಕೂಟದ ಅಧ್ಯಕ್ಷರಾದ ಶಿವಪ್ರಸಾದ್ ಮೈಲೇರಿಯವರು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಸದಸ್ಯರು ಉಪಸ್ಥಿತರಿದ್ದರು.