ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ಧನ.ಎ ಇವರು ಧ್ವಜಾರೋಹಣಗೈದು ಶುಭಹಾರೈಸಿದರು. ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ ಅಚ್ರಪ್ಪಾಡಿ ಇವರು ಸ್ವಾತಂತ್ರ್ಯಪೂರ್ವ ಮತ್ತು ಸ್ವತಂತ್ರದ ನಂತರದಲ್ಲಿ ಆದ ಬದಲಾವಣೆಗಳನ್ನು ತಿಳಿಸುತ್ತಾ ನಾವು ಕಾಲಕ್ಕೆ ತಕ್ಕ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ ಎಂದು ಹೇಳಿ ಎಲ್ಲರಿಗೂ ಶುಭಹಾರೈಸಿದರು.
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆನ್ಲೈನ್ ಮೂಲಕ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಿ ಮಕ್ಕಳನ್ನು ಮತ್ತು ಪೋಷಕರನ್ನು ಪ್ರೋತ್ಸಾಹಿಸಲಾಯಿತು. ಈ ದಿನ ಸಿಹಿ ತಿಂಡಿಯ ಪ್ರಾಯೋಜಕತ್ವವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ಧನ ಎ ಹಾಗೂ ಬಹುಮಾನ ಪ್ರಾಯೋಜಕತ್ವ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ, ಅಚ್ರಪ್ಪಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಸುಂದರಿ ಮತ್ತು ಸಹಾಯಕಿ ಶ್ರೀಮತಿ ರತ್ನಾವತಿ, ಶಾಲಾ ಅಡುಗೆ ಸಿಬ್ಬಂದಿಗಳಾದ ಶ್ರೀಮತಿ ಸರಸ್ವತಿ ಮತ್ತು ಶ್ರೀಮತಿ ಶುಭಲಕ್ಷ್ಮಿ , ಎಸ್.ಡಿ.ಯಂ.ಸಿ ಸರ್ವ ಸದಸ್ಯರು ಮತ್ತು ಶಾಲಾ ಪೋಷಕರು ಉಪಸ್ಥಿತರಿದ್ದರು. ಎಸ್.ಡಿ.ಯಂ.ಸಿ ಉಪಾಧ್ಯಕ್ಷೆ ಶ್ರೀಮತಿ ಕುಮುದ ವಂದನಾರ್ಪಣೆಗೈದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕರಾದ ಚಿನ್ನಸ್ವಾಮಿ ಶೆಟ್ಟಿ ಸಹಕರಿಸಿದರು.