ಅಮರಮುಡ್ನೂರು ಗ್ರಾಮ ಪಂಚಾಯತ್, ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ, ಕುಕ್ಕುಜಡ್ಕ ಪ್ರಾಥಮಿಕ ಶಾಲೆ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಮಹಿಳಾ ಮಂಡಲ ಕುಕ್ಕುಜಡ್ಕ ಇವುಗಳ ಜಂಟಿ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತ ಮಹೊತ್ಸವವನ್ನು ಚೊಕ್ಕಾಡಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು.
ಕುಕ್ಕುಜಡ್ಕ ಅಶ್ವತ್ಥ ಕಟ್ಟೆಯ ಬಳಿಯಿಂದ ಚೊಕ್ಕಾಡಿ ವಿದ್ಯಾಸಂಸ್ಥೆಯವರೆಗೆ ಪಥ ಸಂಚಲನವನ್ನು ಮಾಡಲಾಯಿತು. ಅಮರಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ ಮೇಲ್ತೋಟ ಧ್ವಜಾರೋಹಣಗೈದು ಶುಭ ಹಾರೈಸಿದರು. ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗಳನ್ನು ಊರ ಜನತೆ, ಸಂಘ ಸಂಸ್ಥೆಗಳು ಒಟ್ಟು ಸೇರಿ ಇಡೀ ವರ್ಷ ಸಂಭ್ರಮದಿಂದ ಆಚರಿಸುವಂತಾಗಬೇಕು ಎಂದು ನುಡಿದರು. ಅಮರಮುಡ್ನೂರು ಗ್ರಾಮ ಪಂಚಾಯತ್ ಪಿಡಿಓ ಆಕಾಶ್, ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮಾರಡ್ಕ ಉಪಸ್ಥಿತರಿದ್ದು ಶುಭ ಹಾರೈಸಿದರು. ಚೊಕ್ಕಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿಯವರು ಕಾರ್ಯಕ್ರಮ ನಿರ್ವಹಿಸಿದರು.
ಸ್ವಾತಂತ್ರ್ಯ ಸಂಭ್ರಮದಲ್ಲಿ ಚೊಕ್ಕಾಡಿ ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಮಾಡಬಾಕಿಲು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಸ್ವಿ ಕಡಪಳ, ಕುಕ್ಕುಜಡ್ಕ ಮಹಿಳಾ ಮಂಡಲದ ಅಧ್ಯಕ್ಷೆ ಮಧುಮತಿ ಬೊಳ್ಳೂರು, ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಪದಾಧಿಕಾರಿಗಳು, ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗ, ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ, ಸದಸ್ಯರು ಹಾಗೂ ಸಿಬ್ಬಂದಿ ವರ್ಗ, ಚೊಕ್ಕಾಡಿ ಪ್ರೌಢಶಾಲೆ ಮತ್ತು ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಕುಕ್ಕುಜಡ್ಕ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಶಿಕ್ಷಕರು, ಕುಕ್ಕುಜಡ್ಕ ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.