
ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇದರ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಹಾಗೂ ಸೇನೆಯಲ್ಲಿ ಸುಮಾರು 30 ವರ್ಷಗಳ ಕಾಲ ಸುಬೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋಪಾಲ ವಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಶರ್ಮ, ನಿವೃತ್ತ ಮುಖ್ಯಗುರುಗಳಾದ ಹಿರಿಯಣ್ಣ ಗೌಡ ,ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರುಗಳಾದ ಶ್ರೀಮತಿ ವಸಂತಿ ಜೆ ಸ್ವಾಗತಿಸಿದರು. ವೇದವ್ಯಾಸ ವಿದ್ಯಾಲಯದ ಮುಖ್ಯಗುರುಗಳಾದ ಪ್ರಶಾಂತ್ ವಂದಿಸಿದರು. ಗಣಪತಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸುಬೇದಾರ್ ಗೋಪಾಲ್ ಶಾಲಾ ದತ್ತಿನಿಧಿ ರೂ.5000 ನೀಡಿದರು.