Ad Widget

ಗ್ರಾಮ ಪಂಚಾಯತ್ ಕೊಡಿಯಾಲದಲ್ಲಿ ಸ್ವಾತಂತ್ರ್ಯೋತ್ಸವ

ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಧ್ವಜಾರೋಹಣ ನೆರವೇರಿಸಿ ಪ್ರಮಾಣವಚನ ಬೋಧಿಸಿದರು.

ಗ್ರಾ.ಪಂ. ಉಪಾಧ್ಯಕ್ಷ ಹರ್ಷನ್.ಕೆ.ಟಿ ಹಾಗೂ ಗ್ರಾ.ಪಂ. ಸದಸ್ಯ ಕರುಣಾಕರ ಆಳ್ವ 75ನೇ ಸ್ವಾತಂತ್ರ್ಯೋತ್ಸವಕ್ಕೆ ಸರ್ವರಿಗೂ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕೊಡಿಯಾಲ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಇಲಾಖೆಯ ಪ್ರತಿನಿಧಿಗಳು, ಊರವರು ಉಪಸ್ಥಿತರಿದ್ದರು. ಗ್ರಾ.ಪಂ.ಪಿಡಿಓ ಶ್ರೀಮತಿ ಚಂದ್ರಾವತಿ ಸ್ವಾಗತಿಸಿದರು. ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಯಶೋಧಾ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!