Ad Widget

ಕೋಟೆಮುಂಡುಗಾರು ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಆವರಣದ ತನಕ ಸ್ವಾತಂತ್ರ್ಯೋತ್ಸವ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಮತ್ತು ಸದಸ್ಯರು, ಕೋಟೆಮುಂಡುಗಾರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ಮತ್ತು ಸಹ ಶಿಕ್ಷಕಿಯರು, ಎಸ್.ಡಿ.ಎಂ.ಸಿ. ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ಊರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!