ಕಳಂಜ ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಆ.15 ರಂದು ಕೋಟೆಮುಂಡುಗಾರು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ಜರುಗಿತು. ಕಳಂಜ ಬಾಳಿಲ ಸಹಕಾರಿ ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ವಹಿಸಿದ್ದರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧರಾದ ಭಾಸ್ಕರ ಪೂಜಾರಿ ಪಟ್ಟೆ ಹಾಗೂ ರಮೇಶ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಸ್ವಾತಂತ್ರ್ಯೋತ್ಸವದ ಸವಿನೆನಪು, ವೀರಯೋಧರ ವೀರಾವೇಶದ ಕ್ಷಣಗಳನ್ನು ಮೆಲುಕು ಹಾಕಿದರು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಪೂಜಾರಿ ಪಟ್ಟೆ ಹಾಗೂ ರಮೇಶ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಳಂಜ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ರೈ ಕಳಂಜ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ, ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್, ಕಳಂಜ ಗ್ರಾ.ಪಂ. ಪಿಡಿಓ ಶ್ರೀಧರ್.ಕೆ.ಆರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಳಂಜ ಗ್ರಾಮದ ಶಾಲೆಗಳಾದ ಸ.ಹಿ.ಪ್ರಾ.ಶಾಲೆ ಕೋಟೆಮುಂಡುಗಾರು ಹಾಗೂ ಸ.ಕಿ.ಪ್ರಾ.ಶಾಲೆ ತಂಟೆಪ್ಪಾಡಿ ಇಲ್ಲಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು. ನಂತರ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಳಂಜ ಗ್ರಾಮದ ಎಸ್ಸೆಸ್ಸೆಲ್ಸಿ ಸಾಧಕರಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಚಿತ್ರಾ ತಂಟೆಪ್ಪಾಡಿ ಹಾಗೂ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಕೃತಿಕಾ.ಪಿ ಯವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಾದ ಕು|ಶಹನ್ಯ ಕಿಲಂಗೋಡಿ ಹಾಗೂ ಚೇತನ್ ಮುಗುಪ್ಪುರವರಿಗೆ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಾಯೋಜಕತ್ವದಲ್ಲಿ ಮೊಬೈಲ್ ವಿತರಿಸಲಾಯಿತು. ಗ್ರಾಮದ ವಿವಿಧ ಸಂಘ ಸಂಸ್ಥೆಗಳು ಕಾರ್ಯಕ್ರಮದ ಪ್ರಾಯೋಜಕತ್ವದಲ್ಲಿ ಸಹಕರಿಸಿದವು. ಕಳಂಜ ಗ್ರಾ.ಪಂ. ಪಿಡಿಓ ಶ್ರೀಧರ್ ಕೆ ಆರ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ವಂದಿಸಿದರು. ಕಳಂಜ ಗ್ರಾ.ಪಂ.ಸಿಬ್ಬಂದಿ ಗಿರಿಧರ.ಕೆ ಮತ್ತು ಅಯ್ಯನಕಟ್ಟೆ ಅಂಗನವಾಡಿ ಶಿಕ್ಷಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.