ಭಾರತ ಸ್ವತಂತ್ರಗೊಂಡು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಈ ದಿನದಲ್ಲಿ ಭಾರತದ ಇದುವರೆಗಿನ ಸಾಧನೆ ಅಪಾರ. ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ರಕ್ಷಣಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಹೀಗೆ ಭಾರತವು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಮುಂದಿನ ದಿನಗಳಲ್ಲಿ ಯುವಜನತೆ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ದೇಶವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಹೆಜ್ಹೆಯಿಡಬೇಕಾಗಿದೆ ಎಂದು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ)ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ. ಬಾಲಚಂದ್ರ ಗೌಡ, ಡಾ. ಪ್ರಭಾಕರ ಶಿಶಿಲ, ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜವರೇಗೌಡ ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಹರಿಣಿ ಪುತ್ತೂರಾಯ, ಕಾಲೇಜಿನ ಎನ್ ಸಿ ಸಿ ಅಧಿಕಾರಿ ಲೆ. ಸೀತಾರಾಮ ಎಂ ಡಿ, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಸಂಜೀವ ಕುದ್ಪಾಜೆ, ಚಿತ್ರಲೇಖಾ ಕೆ ಎಸ್, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ, ರೋವರ್- ರೇಂಜರ್ ಕಾರ್ಯಕ್ರಮಾಧಿಕಾರಿಗಳಾದ ತಿಪ್ಪೇಸ್ವಾಮಿ ಡಿ ಎಚ್ ಹಾಗೂ ಹರ್ಷಕಿರಣ ಬಿ ಆರ್, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು, ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್ , ಯುವ ರೆಡ್ ಕ್ರಾಸ್, ರೋವರ್- ರೇಂಜರ್ ಘಟಕದ ಸ್ವಯಂಸೇವಕರು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
- Thursday
- November 21st, 2024