
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆ ಮತ್ತು ಹಿಂದು ಯುವತಿಯರನ್ನು ಲವ್ ಜಿಹಾದ್ ಬಲೆಗೆ ಬೀಳಿಸಿ ಅವರನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುವ ಭಯೋತ್ಪಾದಕರ ಷಡ್ಯಂತ್ರದ ವಿರುದ್ಧ ಮತ್ತು ಮಂಗಳೂರಿನಲ್ಲಿ ಎನ್ ಐ ಎ ಕಛೇರಿ ತೆರೆದು ಭಯೋತ್ಪಾದನಾ ಚಟುವಟಿಕೆಯನ್ನು ನಿಯಂತ್ರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಆ.17 ರಂದು ಬೆಳಗ್ಗೆ 11 ಗಂಟೆಗೆ ಸುಳ್ಯ ತಾಲೂಕು ಕಚೇರಿ ಎದುರು ಜನ ಆಂದೋಲನ ಸಭೆ ನಡೆಸಲಾಗುವುದು ಎಂದು ಹಿಂಜಾವೇ ಅಧ್ಯಕ್ಷ ಮಹೇಶ್ ಉಗ್ರಾಣಿ ಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.