Ad Widget

ಐವರ್ನಾಡು : ಯು.ಡಿ.ಶೇಖರ್ ಗೆ ಸನ್ಮಾನ – ನೂತನ ಪಿ.ಡಿ.ಒ.ಶ್ಯಾಮ್ ಪ್ರಸಾದ್ ಗೆ ಸ್ವಾಗತ

ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯು.ಡಿ.ಶೇಖರ್ ರವರಿಗೆ ಸನ್ಮಾನ ಕಾರ್ಯಕ್ರಮವು ಆ.16 ರಂದು ಐವರ್ನಾಡು ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಯು.ಡಿ.ಶೇಖರ್ ರವರನ್ನು ಶಾಲು ಹೊದಿಸಿ,ಹಾರ ಹಾಕಿ, ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಹಿರಿಯರಾದ ಮಾಧವ ಭಟ್ ಶೃಂಗೇರಿ, ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಪ್ಪ ಗೌಡ ಜೆ.ಟಿ, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಪಿ.ಡಿ.ಒ ಶ್ಯಾಮ ಪ್ರಸಾದ್ ಉಪಸ್ಥಿತರಿದ್ದರು.

. . . . . . . . .

ನಂತರ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಮಂಜುಶ್ರೀ ಗೆಳೆಯರ ಬಳಗ, ಯುವಶಕ್ತಿ ಸಂಘ ಮತ್ತು ಸಿಬ್ಬಂದಿ ವರ್ಗದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಂಜುಶ್ರೀ ಗೆಳೆಯರ ಬಳಗದ ಶಾಂತಾರಾಮ ಕಣಿಲೆಗುಂಡಿ,ಶಿವಪ್ರಸಾದ್ ಕಟ್ಟತ್ತಾರು,ನಟರಾಜ್ ಸಿ.ಕೂಪ್, ಕುಮಾರ ಕಟ್ಟತ್ತಾರು,
ಯೋಗೀಶ ಕಲ್ಲಗದ್ದೆ,ಪುರಂದರ ಶಾಂತಿಮೂಲೆ, ಸಹಕಾರಿ
ಸಂಘದ ನಿರ್ದೇಶಕರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಹಲವು ಊರಿನ ಗಣ್ಯರು ಯು.ಡಿ.ಶೇಖರ್ ರವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.

. . . . . . .

ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಕಾರ್ಯನಿರ್ವಹಿಸಿದ್ದು ಐವರ್ನಾಡು ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡು ಬಂದ ಶ್ಯಾಮ್ ಪ್ರಸಾದರನ್ನು ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.ಸುಬ್ರಹ್ಮಣ್ಯ ಬಾಂಜಿಕೋಡಿ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading