ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದ ಇಂದು ಬೆಳಿಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಬಳಿಕ ಬೆಳ್ಳಾರೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿಯವರ ಮೂಲಕ ಪೊಲೀಸ್ ಇಲಾಖೆಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಬಜರಂಗದಳ ಹಾಗೂ ಬೆಳ್ಳಾರೆ ಹಿಂದೂ ಜಾಗರಣ ವೇದಿಕೆ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.