Ad Widget

ಸುಬ್ರಹ್ಮಣ್ಯ: ಶಾಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಈ ಸಲದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಅನನ್ಯ.ಎಂ.ಡಿ ಹಾಗೂ ವೆನೆಸ್ಸಾ ಶರೀನಾ ಡಿ’ಸೋಜ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಈ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ ‘ಎ ಪ್ಲಸ್’ ಗ್ರೇಡ್ ಪಡೆದ ವಿದ್ಯಾರ್ಥಿಗಳನ್ನೂ ಗೌರವಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಅಕ್ಷರ ದಾಸೋಹ (ಪ್ರಭಾರ)ದ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು ಭಾಗವಹಿಸಿದ್ದರು. ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಆಡಳಿತ ಮಂಡಳಿ ಅಧ್ಯಕ್ಷರಾದ ಗಣೇಶ್ ಪ್ರಸಾದ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನೆಕಲ್ಲು, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿ ಶ್ರೀಮತಿ ಶೋಭಾ ಗಿರಿಧರ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಭಾರತಿ ದಿನೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾರತ್ನ ಹಾಗೂ ಆಡಳಿತ ಮಂಡಳಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!