ಲವ್ ಜಿಹಾದ್ ಮತ್ತು ಉಗ್ರಗಾಮಿ ಚಟುವಟಿಕೆಗಳನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಗಾಮಿ ಕೃತ್ಯಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಮತ್ತು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮುಖ್ಯ ಭಾಷಣಕಾರರಾಗಿದ್ದರು. ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಮಹೇಶ್ ಉಗ್ರಾಣಿಮನೆ,ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ಪ್ರಮುಖರಾದ ರಾಜೇಶ್ ಭಟ್ ನೆಕ್ಕಿಲ, ನಿಕೇಶ್ ಉಬರಡ್ಕ, ಮಹೇಶ್ ಕುಮಾರ್ ಮೇನಾಲ,ಜಯಂತ ಮಡಪ್ಪಾಡಿ, ಲತೇಶ್ ಗುಂಡ್ಯ,ಅಜಿತ್ ಪೇರಾಲು, ದಾಮೋದರ ಮಂಚಿ, ರಮೇಶ ಇರಂತಮಜಲು,ಚಂದು ಕೊಡಿಯಾಲಬೈಲು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಸದಸ್ಯರಾದ ಶಶಿಕಲಾ ನೀರಬಿದಿರೆ, ಶೀಲಾ ಅರುಣ ಕುರುಂಜಿ, ಪ್ರಮುಖರಾದ ಐ.ಬಿ.ಚಂದ್ರಶೇಖರ, ಜಿನ್ನಪ್ಪ ಪೂಜಾರಿ, ಸೋಮನಾಥ ಪೂಜಾರಿ, ಶ್ಯಾಮ್ ಪಾನತ್ತಿಲ, ಅಶೋಕ್ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಲವ್ ಜಿಹಾದ್ ಮತ್ತು ಉಗ್ರಗಾಮಿ ಕೃತ್ಯಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ತಹಶಿಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
- Thursday
- November 21st, 2024